ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ

ಕರ್ನಾಟಕವನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ರಾಜ್ಯ ಸರ್ಕಾರವು ರಾಜ್ಯ ಮಟ್ಟದಲ್ಲಿ ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯನ್ನು ಸ್ಥಾಪಿಸಲು ರಾಜ್ಯಸರ್ಕಾರವು ಸರ್ಕಾರದ ಆದೇಶ ಸಂಖ್ಯೆ: ಕಾಇ ೫೩ ಸಿಎಲ್‌ಸಿ ೨೦೦೩ ಬೆಂಗಳೂರು, ದಿನಾಂಕ: ೨೬/೦೬/೨೦೦೩ ರಲ್ಲಿ ಅನುಮತಿಯನ್ನು ನೀಡಿರುವುದು. ಅದರನ್ವಯ ಸಹಕಾರ ಸಂಘಗಳ ನೋಂದಣೆ ಇಲಾಖೆಯಲ್ಲಿ ನೋಂದನೆ ಸಂಖ್ಯೆ: ೩೬೨/೦೩-೦೪, ದಿನಾಂಕ: ೨೩/೦೭/೨೦೦೩ ರಲ್ಲಿ ನೋಂದಣೆ ಯಾಗಿರುವುದು. ರಾಜ್ಯ ಸರ್ಕಾರದ ರಾಜ್ಯ ಬಾಲಕಾರ್ಮಿಕ ಯೋಜನೆಯನ್ನು, ಕೇಂದ್ರ ಸರ್ಕಾರದ ರಾಷ್ಟಿçÃಯ ಬಾಲಕಾರ್ಮಿಕ ಯೋಜನೆಯನ್ನು ಹಾಗೂ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ ಕಾಯ್ದೆ,)೧೯೮೬ ತಿದ್ದುಪಡಿ ಕಾಯ್ದೆ, ೨೦೧೬ರನ್ನು ಅನುಷ್ಠಾನಗೊಳಿಸುವುದು ಹಾಗೂ ಬಾಲ್ಯಾವಸ್ಥಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ನಿಷೇಧ ಕುರಿತು ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದು ಸೊಸೈಟಿಯ ಪ್ರಮುಖ ಉದ್ದೇಶವಾಗಿದೆ. ಸದರಿ ಸೊಸೈಟಿಗೆ ಮಾನ್ಯ ಸರ್ಕಾರದ ಕಾರ್ಯದರ್ಶಿಗಳು ಕಾರ್ಮಿಕ ಇಲಾಖೆ ಇವರು ಅಧ್ಯಕ್ಷರಾಗಿರುತ್ತಾರೆ.


     ರಾಜ್ಯದ ೩೦ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯನ್ನು ಸ್ಥಾಪಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಮೂಲಕ ಹಾಗೂ ರಾಜ್ಯ ಮಟ್ಟದಲ್ಲಿ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಮೂಲಕ ಕರ್ನಾಟಕವನ್ನು ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಮವಹಿಸಲಾಗುತ್ತದೆ. ೨೦೦೧ ರಲ್ಲಿ ರಾಜ್ಯ ಸರ್ಕಾರವು ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ, “ರಾಜ್ಯ ಬಾಲ ಕಾರ್ಮಿಕ ನಿರ್ಮೂಲನಾ ಕ್ರಿಯಾ ಯೋಜನೆ” ಯನ್ನು ಜಾರಿಗೆ ತಂದ ಪ್ರಥಮ ರಾಜ್ಯವೆಂಬುದು ಹೆಮ್ಮೆಯ ವಿಷಯವಾಗಿದೆ.

Read more........

https://childlabour.karnataka.gov.in/storage/pdf-files/child labour note.doc

 

ಇತ್ತೀಚಿನ ನವೀಕರಣ​ : 30-11-2020 12:26 PM ಅನುಮೋದಕರು: Approver childlabour


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಬಾಲ ಕಾರ್ಮಿಕ ನಿರ್ಮೂಲನಾ ಯೋಜನೆ ಸೊಸೈಟಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080